ನವದೆಹಲಿ: ಮೊಹಲ್ಲಾ ಕ್ಲಿನಿಕ್‌ಗಳನ್ನು 'ಆಯುಷ್ಮಾನ್ ಆರೋಗ್ಯ ಮಂದಿರ' ಎಂದು ಮರುನಾಮಕರಣ ಮಾಡಲಾಗುವುದು ಎಂದು ನೂತನ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಂಜೀದರ್ ಸಿಂಗ್ ಸಿರ್ಸಾ ಶುಕ್ರವಾರ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮೊಹಲ್ಲಾ ಕ್ಲಿನಿಕ್‌ಗಳು ಎಎಪಿಯ ಹಣ ಸುಲಿಗೆ ಮಾಡುವ ಎಟಿಎಂಗಳು ಎಂದು ಆರೋಪ ಮಾಡಿದರು.
ಬಿಜೆಪಿ ಸರ್ಕಾರ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ಸ್ಥಾಪಿಸಿ ಅಲ್ಲಿ ಎಲ್ಲಾ ನಿವಾಸಿಗಳಿಗೆ ಉಚಿತ ಪ್ರಾಥಮಿಕ ಆರೋಗ್ಯ ಸೇವೆ ನೀಡಲಾಗುವುದು ಎಂದು ಸಿರ್ಸಾ ಹೇಳಿದರು.