ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ತರಗತಿ ಆಯೋಜಿಸಲಾಯಿತು.
ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಆರ್ ಟಿ ಕಚೇರಿಯ ಸಹಾಯಕ ಮೋಟಾರು ವಾಹನ ತಪಾಸಣಾಧಿಕಾರಿ ಮನೀಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ರಸ್ತೆ ಸುರಕ್ಷತೆ ಹಾಗೂ ಕಾನೂನಿನ ಬಗ್ಗೆ ತರಗತಿ ನೀಡಿದರು. ಸ್ವಯಂ ಸೇವಕಿ ಶ್ರೀಲಕ್ಷ್ಮಿ ಸ್ವಾಗತಿಸಿ, ಗೋಕುಲ್ ನಿರೂಪಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವಷಿತ್ ಕೆ. ಸಂಯೋಜಿಸಿದರು.