HEALTH TIPS

ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ: ಸ್ಯಾಮ್ ಪಿತ್ರೋಡಾ

 ನವದೆಹಲಿ: ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ ಎಂದು ಸಾಗರೋತ್ತರ ಭಾರತೀಯ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ 12.35 ಎಕರೆ ಸರ್ಕಾರಿ ಭೂಮಿಯನ್ನು ಪಿತ್ರೋಡಾ ಅವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ಆರೋಪಿಸಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.


ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ದೂರದರ್ಶನ ಮತ್ತು ಮುದ್ರಣ ಮಾಧ್ಯಮಗಳು ಸೇರಿದಂತೆ ಇತ್ತೀಚೆಗೆ ಭಾರತೀಯ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಪರಿಗಣಿಸಿ, ನಾನು ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ ಎಂದು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ' ಎಂದು ಬರೆದುಕೊಂಡಿದ್ದಾರೆ.

'ಇದಲ್ಲದೆ, ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಮತ್ತು 2004 ರಿಂದ 2014ರವರೆಗೆ ಡಾ.ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದ ಸಮಯದಲ್ಲಿ ಭಾರತ ಸರ್ಕಾರದೊಂದಿಗೆ ಕೆಲಸ ಮಾಡಿದ ನನ್ನ ಅಧಿಕಾರಾವಧಿಯಲ್ಲಿ ನಾನು ಎಂದಿಗೂ ಯಾವುದೇ ಸಂಬಳವನ್ನು ತೆಗೆದುಕೊಂಡಿಲ್ಲ' ಎಂದು ಪಿತ್ರೋಡಾ ಹೇಳಿದ್ದಾರೆ.

'ನನ್ನ 83 ವರ್ಷಗಳ ಜೀವಿತಾವಧಿಯಲ್ಲಿ ಭಾರತ ಅಥವಾ ಬೇರೆ ಯಾವುದೇ ದೇಶದಲ್ಲಿ ನಾನು ಎಂದಿಗೂ ಲಂಚ ನೀಡಿಲ್ಲ ಅಥವಾ ಸ್ವೀಕರಿಸಿಲ್ಲ ಎಂಬುದನ್ನು ನಿಸ್ಸಂದಿಗ್ಧವಾಗಿ ಹೇಳಲು ಬಯಸುತ್ತೇನೆ. ಇದು ಸಂಪೂರ್ಣ ಮತ್ತು ನಿರಾಕರಿಸಲಾಗದ ಸತ್ಯ' ಎಂದು ಪಿತ್ರೋಡಾ ಪ್ರತಿಪಾದಿಸಿದ್ದಾರೆ.

ಸ್ಯಾಮ್ ಪಿತ್ರೋಡಾ ಅವರು ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಐದು ಹಿರಿಯ ಸರ್ಕಾರಿ ಅಧಿಕಾರಿಗಳ ಸಹಾಯದಿಂದ ಕರ್ನಾಟಕದ ಬೆಂಗಳೂರಿನ ಯಲಹಂಕದಲ್ಲಿ₹150 ಕೋಟಿ ಮೌಲ್ಯದ 12.35 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕೌನ್ಸಿಲರ್ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಜಾರಿ ನಿರ್ದೇಶನಾಲಯ ಮತ್ತು ಕರ್ನಾಟಕ ಲೋಕಾಯುಕ್ತಕ್ಕೆ ರಮೇಶ್‌ ದೂರು ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries