ಕಾಸರಗೋಡು: ದೆಹಲಿಯಲ್ಲಿ ನಡೆದ ವಿದನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಬಗ್ಗೆ ಕಾಸರಗೋಡು ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು. 27ವರ್ಷಗಳ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯ ಗೆಲುವಿನ ಹಿನ್ನೆಲೆಯಲ್ಲಿ ಕಾಸರಗೋಡು ನಗರದಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಿಸಿ ಮೆರವಣಿಗೆ ನಡೆಸಿದರು. ಬಿಜೆಪಿ ಮುನ್ಸಿಪಲ್ ನಗರ ಸಮಿತಿ ನೇತೃತ್ವದಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು.
ಕರಂದಕ್ಕಾಡಿನಿಂದ ಆರಂಭಗೊಂಡ ವಿಜಯೋತ್ಸವ ಮೆರವಣಿಗೆ ಮಲ್ಲಿಕಾರ್ಜುನ ಕ್ಷೇತ್ರ ಪರಿಸರದಲ್ಲಿ ಸಮಾರೋಪಗೊಂಡಿತು. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ ಎಲ್. ಅಶ್ವಿನಿ ಸಮಾರಂಭ ಉದ್ಘಾಟಿಸಿದರು. ನಗರ ಸಮಿತಿ ಉಪಾಧ್ಯಕ್ಷ ದಯಾನಂದ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಮಂಡಲ ಕಾರ್ಯದರ್ಶಿ ಸುಕುಮಾರ ಕುದ್ರೆಪ್ಪಾಡಿ, ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಮಹಿಳಾ ಮೋರ್ಛಾ ಜಿಲ್ಲಾಧ್ಯಕ್ಷೆ ಪುಷ್ಪಾ ಗೋಪಾಲನ್, ಮಂಡಲಾಧ್ಯಕ್ಷೆ ಪ್ರಿಯಾ ನಾಯ್ಕ್, ಹಾಗೂ ಪಕ್ಷದ ನಗರಸಭಾ ಘಟಕದ ಕಾರ್ಯಕರ್ತರು ಪಾಲ್ಗೊಂಡಿದ್ದರು.