ನವದೆಹಲಿ: ದೆಹಲಿ ವಿಧಾನಸಭೆಗೆ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಮ್‌ಆದ್ಮಿ ಪಕ್ಷ (ಎಎಪಿ)ದ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.
ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಪಕ್ಷದ 22 ಶಾಸಕರು ಭಾನುವಾರ ಸಭೆ ನಡೆಸಿ ವಿರೋಧ ಪಕ್ಷದ ನಾಯಕಿಯಾಗಿ ಆತಿಶಿ ಅವರನ್ನು ಆಯ್ಕೆ ಮಾಡಿದ್ದಾರೆ.
ಫೆ.24ರಿಂದ ದೆಹಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. 3 ದಿನಗಳ ಅಧಿವೇಶನದಲ್ಲಿ, ಆಡಳಿತರೂಢ ಬಿಜೆಪಿಯು ಹಿಂದಿನ ಎಎಪಿ ಸರ್ಕಾರದ ಸಾಧನೆಯ ಕುರಿತ ಸಿಎಜಿ ವರದಿಯನ್ನು ಮಂಡಿಸುವುದಾಗಿ ಹೇಳಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ 26 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ರೇಖಾ ಗುಪ್ತಾ ಅವರು ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ್ದಾರೆ.