HEALTH TIPS

ಅಮೆರಿಕದ ನೆರವು ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ದಾಖಲೆ ಪರಿಶೀಲನೆ: ಎಂವಿಎ

ನವದೆಹಲಿ: ಅಂತರರಾಷ್ಟ್ರೀಯ ಅಭಿವೃದ್ಧಿಗಾಗಿನ ಅಮೆರಿಕದ ಏಜೆನ್ಸಿಯ (USAID) ನಿಧಿಯನ್ನು ಭಾರತದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಬಳಸಿಕೊಂಡಿರುವ ಕುರಿತ ಈಗಲೇ ಹೇಳಿಕೆ ನೀಡುವುದು ಸಮಂಜಸವಲ್ಲ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಹೇಳಿದೆ.

ಭಾರತದಲ್ಲಿ ಮತದಾನವನ್ನು ಪ್ರೋತ್ಸಾಹಿಸುವ ಸಲುವಾಗಿ ಅಮೆರಿಕ ನೀಡುತ್ತಿದ್ದ ₹ 182 ಕೋಟಿ (21 ಮಿಲಿಯನ್‌ ಡಾಲರ್‌) ನೆರವನ್ನು ಕಡಿತಗೊಳಿಸಲಾಗಿದೆ.

ವೆಚ್ಚ ನಿಯಂತ್ರಣದ ಭಾಗವಾಗಿ ಈ ಕ್ರಮ ಕೈಗೊಂಡಿರುವುದಾಗಿ ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯ (ಡಿಒಜಿಇ) ಉಸ್ತುವಾರಿ ಎಲಾನ್‌ ಮಸ್ಕ್‌ ಅವರು ಕಳೆದ ವಾರ ಘೋಷಿಸಿದ್ದರು.

ಇದರ ಬೆನ್ನಲ್ಲೇ, ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ಟೀಕಾಪ್ರಹಾರ ನಡೆಸುತ್ತಿವೆ. ಈ ವಿಚಾರವು ಸದ್ಯ ವಿವಾದ ಸ್ಪರೂಪ ಪಡೆದುಕೊಂಡಿದೆ.

ಈ ಕುರಿತು ಮಾತನಾಡಿರುವ ಎಂಇಎ ವಕ್ತಾರ ರಣಧೀರ್‌ ಜೈಸ್ವಾಲ್‌, ಅಮೆರಿಕ ಆಡಳಿತದ USAIDಗೆ ಸಂಬಂಧಿಸಿದ ಮಾಹಿತಿಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

'ಅಮೆರಿಕ ಆಡಳಿತವು, ಭಾರತವನ್ನು ಹಣಕಾಸು ನೆರವು ನಿಧಿಯಿಂದ ಹೊರಗಿಟ್ಟಿರುವುದಾಗಿ ತಿಳಿದುಬಂದಿದೆ' ಎಂದಿರುವ ಜೈಸ್ವಾಲ್‌, 'ಈ ವಿಚಾರವು (ದೇಶದ ಚಟುವಟಿಕೆಗಳಲ್ಲಿ ವಿದೇಶಿ ಹಸ್ತಕ್ಷೇಪ) ನಿಸ್ಸಂಶಯವಾಗಿ ಅತ್ಯಂತ ತೊಂದರೆಯನ್ನುಂಟು ಮಾಡುತ್ತಿದೆ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

'ಇದು (ಅಮೆರಿಕದ ನೆರವು) ಭಾರತದ ಆಂತರಿಕ ವ್ಯವಹಾರಗಳಲ್ಲಿ ವಿದೇಶಿ ಹಸ್ತಕ್ಷೇಪ ಕುರಿತ ಕಳವಳಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ಇಲಾಖೆಗಳು, ಸಂಸ್ಥೆಗಳು ಈ ವಿಚಾರವಾಗಿ ಪರಿಶೀಲನೆ ನಡೆಸುತ್ತಿವೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕವಾಗಿ ಹೇಳಿಕೆ ನೀಡುವುದು ಸಮಂಜಯಸವಲ್ಲ. ಅಧಿಕಾರಿಗಳು ಈ ಕುರಿತು ಪರಿಶೀಲನೆ ಕೈಗೊಂಡಿರುವುದರಿಂದ, ಹೆಚ್ಚಿನ ಮಾಹಿತಿಯನ್ನು ನಂತರ ಪ್ರಕಟಿಸಬಹುದು' ಎಂದು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries