ಲಾಹೋರ್: ಇಲ್ಲಿನ ಪಂಜಾಬ್ ಪ್ರಾಂತ್ಯದ ಪೊಲೀಸರು ಸೋಮವಾರ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಪಕ್ಷದ (ಪಿಟಿಐ) ನಾಯಕರ ಮನೆ ಮೇಲೆ ದಾಳಿ ನಡೆಸಿ ಹಲವು ನಾಯಕರನ್ನು ಬಂಧಿಸಿದ್ದಾರೆ.
ದೇಶದಲ್ಲಿ ಪಿಟಿಐ ಚಟುವಟಿಕೆಗಳಿಗೆ ಮತ್ತೆ ಚಾಲನೆ ನೀಡಲಾಗುವುದು ಎಂದು ಘೋಷಣೆ ಮಾಡಿದ ಬೆನ್ನಲ್ಲೇ, ಈ ಬೆಳವಣಿಗೆ ನಡೆದಿದೆ.
'ರಾವಲ್ಪಿಂಡಿಯಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಸಲು ಸಾವಿರಾರು ಕಾರ್ಯಕರ್ತರು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ಪೊಲೀಸರು ಎಲ್ಲರನ್ನು ಸುತ್ತುವರಿದು ಬಂಧಿಸಿದ್ದಾರೆ' ಎಂದು ಪಕ್ಷದ ಹಿರಿಯ ನಾಯಕ ಶೌಕತ್ ಬಸ್ರಾ ತಿಳಿಸಿದ್ದಾರೆ.