ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಫ್ರಾನ್ಸ್ ಪ್ರವಾಸವನ್ನು ಸೋಮವಾರ ಕೈಗೊಂಡರು. ಅಲ್ಲಿ ಅವರು ಮಂಗಳವಾರ 'ಎ.ಐ ಆಯಕ್ಷನ್' ಶೃಂಗದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಜತೆ ಸಹ-ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ವೇಳೆ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ನಂತರ ಅವರು ವ್ಯಾಪಾರ ಕ್ಷೇತ್ರದ ಪ್ರಮುಖರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಬ್ಬರೂ ನಾಯಕರು ಮಾರ್ಸೇಲ್ ನಗರದಲ್ಲಿನ ಯುದ್ಧ ಸ್ಮಾರಕಕ್ಕೆ ಬುಧವಾರ ಭೇಟಿ ನೀಡಲಿದ್ದಾರೆ. ಮೊದಲ ಮಹಾಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಅಲ್ಲಿ ಗೌರವ ಸಲ್ಲಿಸಲಿದ್ದಾರೆ.
ಆ ಬಳಿಕ ಪ್ರಧಾನಿ ಅವರು ಮಾರ್ಸೇಲ್‌ನಲ್ಲಿ ಭಾರತದ ಹೊಸ ಕಾನ್ಸುಲೇಟ್ ಜನರಲ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಇದು ಫ್ರಾನ್ಸ್‌ಗೆ ಮೋದಿ ಅವರ ಆರನೇ ಭೇಟಿಯಾಗಿದೆ.
ಆ ಬಳಿಕ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.