HEALTH TIPS

ಕ್ರಿಮಿನಲ್ ಅಪರಾಧಿಗಳಿಗೆ ಶಾಶ್ವತ ನಿರ್ಬಂಧ; ಸಂಸತ್ತಿನ ಅಧಿಕಾರ: ಸುಪ್ರೀಂ ಕೋರ್ಟ್‌

ನವದೆಹಲಿ: ಕ್ರಿಮಿನಲ್ ಅಪರಾಧಗಳಲ್ಲಿ ಶಿಕ್ಷೆಗೆ ಗುರಿಯಾದವರನ್ನು ಶಾಸನ ಸಭೆಗಳಿಂದ ಶಾಶ್ವತವಾಗಿ ದೂರ ಇರಿಸಬೇಕು ಎಂಬ ಕೋರಿಕೆಯನ್ನು ಕೇಂದ್ರ ಸರ್ಕಾರವು ವಿರೋಧಿಸಿದೆ. ಈ ಸಂಬಂಧ ಅದು ಸುಪ್ರೀಂ ಕೋರ್ಟ್‌ಗೆ ತನ್ನ ಅಭಿಪ್ರಾಯವನ್ನು ಸಲ್ಲಿಸಿದೆ.

ಈ ಬಗೆಯಲ್ಲಿ ನಿರ್ಬಂಧ ವಿಧಿಸುವ ಅಧಿಕಾರ ಇರುವುದು ಸಂಸತ್ತಿಗೆ ಮಾತ್ರ ಎಂದು ಕೇಂದ್ರ ಹೇಳಿದೆ.

ಈ ಸಂಬಂಧವಾಗಿ ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಅರ್ಜಿಯು, ಕ್ರಿಮಿನಲ್ ಅಪರಾಧ ಎಸಗಿದವರು ಜೀವನಪರ್ಯಂತ ಚುನಾವಣೆಗೆ ಸ್ಪರ್ಧಿಸದಂತೆ ಮಾಡಬೇಕು, ಶಾಸಕರು ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂಬ ಕೋರಿಕೆಯನ್ನು ಹೊಂದಿದೆ.

ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ 8(1)ರ ಪ್ರಕಾರ, ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದವರಿಗೆ ಆರು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಇದೆ ಎಂದು ಕೇಂದ್ರವು ವಿವರಿಸಿದೆ.

'ಈ ಸೆಕ್ಷನ್‌ನಲ್ಲಿ ಹೇಳಿರುವ ಅನರ್ಹತೆಯ ಅವಧಿಗೆ ಮಿತಿ ಇದೆ. ಇದು ಸಂಸತ್ತು ರೂಪಿಸಿದ ನೀತಿ. ಈ ಮಿತಿಯ ಬದಲಿಗೆ, ಜೀವನಪರ್ಯಂತ ನಿರ್ಬಂಧವನ್ನು ಹೇರುವುದು ಸರಿಯಾಗುವುದಿಲ್ಲ' ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ.

ಆರು ವರ್ಷಗಳ ನಿರ್ಬಂಧ ಎನ್ನುವುದು ಸಾಂವಿಧಾನಿಕವಾಗಿ ಸರಿಯಾಗಿಯೇ ಇದೆ, ಅದು ಸಂಸತ್ತಿನ ಅಧಿಕಾರಗಳ ಮಿತಿಯಲ್ಲಿಯೇ ಇದೆ ಎಂದು ಕೇಂದ್ರ ಹೇಳಿದೆ. ಯಾವುದೇ ಬಗೆಯ ದಂಡವನ್ನು ವಿಧಿಸುವ ಸಂದರ್ಭದಲ್ಲಿ ಸಂಸತ್ತು ಆ ದಂಡವು ತಪ್ಪಿನ ಪ್ರಮಾಣಕ್ಕೆ ಅನುಗುಣವಾಗಿ ಇದೆಯೇ, ಶಿಕ್ಷೆಯು ತರ್ಕಬದ್ಧವಾಗಿ ಇದೆಯೇ ಎಂಬುದನ್ನು ಪರಿಶೀಲಿಸುತ್ತದೆ ಎಂದು ವಿವರಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries