HEALTH TIPS

ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರವಿಂದರ್ ಸಿಂಗ್ ಲವ್ಲಿ ನೇಮಕ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ. 

ಫೆಬ್ರುವರಿ 24 ರಂದು ದೆಹಲಿ ನೂತನ ಸರ್ಕಾರದ ಮೊದಲ ಅಧಿವೇಶನ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ಹೊಸದಾಗಿ ಚುನಾಯಿತರಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಳಿಕ ಮಧ್ಯಾಹ್ನ 2 ಗಂಟೆಗೆ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಫೆ.25ರಂದು ಲೆಫ್ಟಿನೆಂಟ್ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಹಾಲೇಖಪಾಲರ ವರದಿಗಳನ್ನು (ಸಿಎಜಿ) ಮಂಡಿಸಲಾಗುವುದು. ಫೆ. 26ರಂದು ಲೆಫ್ಟಿನೆಂಟ್ ಗವರ್ನರ್‌ ಅವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಯಲಿದೆ. ನಂತರ ದೆಹಲಿ ವಿಧಾನಸಭೆಯ ಉಪಸಭಾಪತಿ ಅವರನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೇ ವೇಳೆ ಆರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಬಳಿಕ ನಡೆದ ಮೊದಲ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ರೇಖಾ ಗುಪ್ತಾ, 'ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ₹5 ಲಕ್ಷ ವೆಚ್ಚದವರೆಗೆ ಉಚಿತ ಚಿಕಿತ್ಸೆ ಒದಗಿಸುವುದು ಹಾಗೂ ಬಾಕಿ ಇರುವ 14 ಸಿಎಜಿ ವರದಿಗಳನ್ನು ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಮಂಡಿಸಲಾಗುವುದು' ಎಂದು ಹೇಳಿದ್ದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ 48 ಕ್ಷೇತ್ರಗಳನ್ನು ಗೆದ್ದು ಬಿಜೆಪಿ 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಎಎಪಿ 22 ಸ್ಥಾನಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್ ಸತತ ಮೂರನೇ ಸಲವೂ ಖಾತೆ ತೆರೆಯುವಲ್ಲಿ ವಿಫಲವಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries