ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬದಿಯಡ್ಕ ವಲಯದ ಭಾರತೀ ವಿದ್ಯಾಪೀಠದ ಅನ್ನಛತ್ರ ನಿರ್ಮಾಣಕ್ಕೆ ಧರ್ಮಸ್ಥಳದಿಂದ 2 ಲಕ್ಷ ರೂ. ಮಂಜೂರಾಗಿದ್ದು, ಇದರ ಡಿಡಿಯನ್ನು ಶಾಲಾ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ, ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಮುಖೇಶ್, ವಲಯ ಮೇಲ್ವಿಚಾರಕ ಗೋಪಾಲಕೃಷ್ಣ, ಜನಜಾಗೃತಿ ವೇದಿಕೆ ಸದಸ್ಯರುಗಳಾದ ಹರೀಶ್ ಗೋಸಾಡ, ಜಯರಾಮ ಪಾಟಾಳಿ ಪಡುಮಲೆ, ಒಕ್ಕೂಟದ ಅಧ್ಯಕ್ಷ ತಾರಾನಾಥ ರೈ, ಶಾಲಾ ಪ್ರಬಂಧಕ ಜಯಪ್ರಕಾಶ್ ಪಜಿಲ, ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ, ಈಶ್ವರ ಭಟ್ ಹಳೆಮನೆ, ಡಾ. ಬೇ.ಸಿ. ಗೋಪಾಲಕೃಷ್ಣ ಭಟ್, ನವನೀತ ಪ್ರಿಯ ಕಿನ್ನಿಂಗಾರ್ ಉಪಸ್ಥಿತರಿದ್ದರು.