ಇಂಫಾಲ: ಭದ್ರತಾ ಪಡೆಗಳಿಗೆ ಬೆದರಿಕೆಯೊಡ್ಡಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಬೆದರಿಕೆಯೊಡ್ಡಿದ್ದ ಮಣಿಪುರದ ನಿಷೇಧಿತ ಸಂಘಟನೆ ಕಾಂಗ್ಲೈಪಾಕ್ ಕಮ್ಯುನಿಸ್ಟ್ ಪಕ್ಷದ (ಸಿಟಿ ಮೈಟೈ) ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.
ಬಿಷ್ಣುಪುರ ಮತ್ತು ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭದ್ರತಾ ಪಡೆಗಳು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಣಿಪುರದ ನಿಷೇಧಿತ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್‌ನ (ಕೆ) ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ವಾಂಗ್ಖೇಮ್ ರೋಹಿತ್ ಸಿಂಗ್ (18) ಮತ್ತು ತಂಗ್ಜಮ್ ನೊಂಗನ್ ಮೀಟೈ (18) ಎಂದು ಗುರುತಿಸಲಾಗಿದ್ದು, ಹಣ ಸುಲಿಗೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.