ಕೊಚ್ಚಿ: ದೂರದರ್ಶನದಲ್ಲಿ ಈಚೆಗೆ ನಡೆದ ಚರ್ಚೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಪಿ.ಸಿ ಜಾರ್ಜ್ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
'ಜಾರ್ಜ್ ಅವರ ಹೇಳಿಕೆ ಧಾರ್ಮಿಕ ದ್ವೇಷವನ್ನು ಪ್ರಚೋದಿಸುತ್ತದೆ.
ಅವರು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ' ಎಂದು ಆರೋಪಿಸಿ ಮುಸ್ಲಿಂ ಯೂತ್ ಲೀಗ್ ನಾಯಕ ಮೊಹಮ್ಮದ್ ಶಿಹಾಬ್ ಅವರು ದೂರು ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೊಟ್ಟಾಯಂ ಜಿಲ್ಲಾ ನ್ಯಾಯಾಲಯ ವಜಾ ಮಾಡಿತ್ತು. ಬಳಿಕ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.