ನವದೆಹಲಿ: ಆಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ ಎನ್ನಲಾದ ಕ್ರಿಶ್ಚಿಯನ್ ಮಿಷೆಲ್ ಜೇಮ್ಸ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ.
ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಮತ್ತು ಸಂದೀಪ್ ಮೆಹ್ತಾ ಅವರು ಇರುವ ಪೀಠವು ಜಾಮೀನು ಮಂಜೂರು ಮಾಡಿದೆ.
'ತನಿಖೆ ಇನ್ನೂ ಪ್ರಗತಿಯಲ್ಲಿ ಇದೆ, ಜೇಮ್ಸ್ ಅವರು ಆರು ವರ್ಷಗಳಿಂದ ಜೈಲಿನಲ್ಲಿ ಇದ್ದಾರೆ' ಎಂದು ಹೇಳಿದೆ.
ಜೇಮ್ಸ್ ಅವರು ಹಣದ ಅಕ್ರಮ ವರ್ಗಾವಣೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಆ ಪ್ರಕರಣದಲ್ಲಿ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯು ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಹೀಗಾಗಿ ಅವರು ತಕ್ಷಣಕ್ಕೆ ಬಿಡುಗಡೆ ಆಗುವುದಿಲ್ಲ.