ಮಂಗಳೂರು ಫೆಬ್ರವರಿ 23: ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ನಡುವೆ ಇದೀಗ ಹವಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಐದು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ, ಕೇರಳದ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ, ಕಾಸರಗೋಡಲ್ಲಿ ಮಳೆಯಾಗುವ ಸಾಧ್ಯತೆ ಇದೆ.