ಸಮರಸ ಚಿತ್ರಸುದ್ದಿ: ಬದಿಯಡ್ಕ: ಮಾ.1 ರಿಂದ 9ರ ವರೆಗೆ ಕಾರ್ಮಾರು ಶ್ರೀಮಹಾವಿಷ್ಣು ದೇವಾಲಯದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು ಮಾ.9 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮೈಸೂರು ರಾಜ,ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದು, ಅವರನ್ನು ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಆಮಂತ್ರಿಸಲಾಯಿತು.