ಬದಿಯಡ್ಕ: ವಿವಿಧ ಶಾಲೆಗಳಲ್ಲಿ 36 ವರ್ಷಗಳ ಕಾಲ ಅಧ್ಯಾಪಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ವಿದ್ಯಾಗಿರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗುತ್ತಿರುವ ಸುಬ್ರಹ್ಮಣ್ಯ ಭಟ್ ಅವರ ಬೀಳ್ಕೊಡುವ ಕಾರ್ಯಕ್ರಮ ಶಾಲೆಯಲ್ಲಿ ಜರಗಿತು. ಬದಿಯಡ್ಕ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಎಂ ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯಿತಿ ಅಧ್ಯಕ್ಷೆ ಶಾಂತ ಬಿ ಉದ್ಘಾಟಿಸಿದರು. ಕುಂಬಳೆ ಉಪಜಿಲ್ಲಾ ಶಿಕ್ಷಣಾಕಾರಿ ಶಶಿಧರ್ ಎಂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶುಭಲತಾ ರೈ, ಬಾಲಕೃಷ್ಣ ಶೆಟ್ಟಿ ಕಡಾರು, ಹಮೀದ್ ಪಳ್ಳತ್ತಡ್ಕ, ಈಶ್ವರ ನಾಯ್ಕ್, ಪಿಟಿಎ ಅಧ್ಯಕ್ಷ ಲತೀಫ್, ಎಸ್ ಎಂ ಸಿ ಅಧ್ಯಕ್ಷ ಮೊಹಮ್ಮದ್ ಶರೀಫ್, ಮಾತೃ ಮಂಡಳಿ ಅಧ್ಯಕ್ಷೆ ಲೀಶ್ಮ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕೆ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ನೌಕರ ಸಂಘದ ಕಾರ್ಯದರ್ಶಿ ಜಯಕುಮಾರಿ ಯಂ.ಕೆ. ವಂದಿಸಿದರು. ಹಿರಿಯ ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನ ಭೋಜನದ ನಂತರ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.