ಚಂಡೀಗಢ: ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಕೇಂದ್ರ ತಂಡದ ನೇತೃತ್ವವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ವಹಿಸಲಿದ್ದಾರೆ.
ಪಂಜಾಬ್ ಕೃಷಿ ಸಚಿವ ಗುರ್ಮೀತ್ ಸಿಂಗ್ ಖುದ್ದಿಯಾನ್ ಅವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಚಂಡೀಗಢದಲ್ಲಿರುವ ಪಂಜಾಬ್‌ನ ಮಹಾತ್ಮ ಗಾಂಧಿ ರಾಜ್ಯ ಸಾರ್ವಜನಿಕ ಆಡಳಿತ ಸಂಸ್ಥೆಯಲ್ಲಿ ಸಭೆ ನಡೆಯಲಿದೆ.
ರೈತರ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ 28 ಸದಸ್ಯರ ನಿಯೋಗವು ಸಭೆಯಲ್ಲಿ ಭಾಗವಹಿಸಲಿದೆ ಎಂದು ರೈತರು ತಿಳಿಸಿದ್ದಾರೆ.
ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ರೈತ ನಾಯಕ ಜಗಜಿತ್ ಸಿಂಗ್ ಡಲ್ಲೇವಾಲ್ ಅವರೂ ಸಭೆಯಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.