ನವದೆಹಲಿ: ಭಾರತ ಮತ್ತು ಕತಾರ್ ದೇಶಗಳು ಇಂದು (ಮಂಗಳವಾರ) ಕಾರ್ಯತಂತ್ರದ ಪಾಲುದಾರಿಕೆಯನ್ನು ವೃದ್ಧಿಸುವ ಒಪ್ಪಂದಕ್ಕೆ ಸಹಿ ಹಾಕಿವೆ.
ನವದೆಹಲಿಯ 'ಹೈದರಾಬಾದ್ ಹೌಸ್'ನಲ್ಲಿ ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಭೇಟಿ ಮಾಡಿದ ಭಾರತ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.
ಉಭಯ ದೇಶಗಳ ನಾಯಕರ ಉಪಸ್ಥಿತಿಯಲ್ಲಿ ಕಾರ್ಯತಂತ್ರದ ಪಾಲುದಾರಿಕೆಯ ಒಪ್ಪಂದದ ದಾಖಲೆಯನ್ನು ವಿನಿಮಯ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕತಾರ್ ದೊರೆ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಬಾಂಧವ್ಯದ ಕುರಿತು ವಿಸ್ತೃತ ಮಾತುಕತೆ ನಡೆಸಿದ್ದಾರೆ.
ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ.
ಉಭಯ ದೇಶಗಳ ಸಮಸ್ಯೆಗಳ ಕುರಿತು ಅಭಿಪ್ರಾಯ ಹಂಚಿಕೊಳ್ಳಲಾಯಿತು. ಆದಾಯದ ಮೇಲೆ ತೆರಿಗೆ, ದ್ವಿಗುಣ ತೆರಿಗೆಯನ್ನು ತಪ್ಪಿಸುವುದು, ಹಣಕಾಸಿನ ವಂಚನೆ ತಡೆಗಟ್ಟುವ ನವೀಕೃತ ಒಪ್ಪಂದವನ್ನು ವಿನಿಮಯ ಮಾಡಿಕೊಳ್ಳಲಾಯಿತು.
ಕತಾರ್ ದೊರೆಯ ಭಾರತ ಭೇಟಿಯಿಂದ ಉಭಯ ದೇಶಗಳ ಬಹುಮುಖಿ ಆಯಾಮದ ಪಾಲುದಾರಿಕೆಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ.

.jpg)

