ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಪುಟವನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ ಎಂದು ಆರೋಪಿಸಿ 'ಮೆಟಾ' ಸಂಸ್ಥೆಗೆ ದೂರು ನೀಡಿದ್ದಾರೆ.
ತಮ್ಮ ವಕೀಲ ಸಂಜಯ್ ಬಸು ಅವರ ಮೂಲಕ 'ಮೆಟಾ' ಸಂಸ್ಥೆಗೆ ಗುರುವಾರ ಪತ್ರ ಬರೆದಿರುವ ಅಭಿಷೇಕ್, ಫೇಸ್‌ಬುಕ್ ಪುಟದಲ್ಲಿ ಮಾಹಿತಿಯನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.
ಕಂಪನಿಯು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಅವರು, ಇಲ್ಲದಿದ್ದರೆ ಮೆಟಾ ವಿರುದ್ಧವೇ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.