ಕಾಸರಗೋಡು: ಪಳ್ಳಿಕ್ಕರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಿನ ವೇತನ ಆಧಾರದಲ್ಲಿ 15 ದಿನಗಳ ಕಾಲ ಕ್ಲರ್ಕ್ ಹುದ್ದೆಗೆ ತಾತ್ಕಾಲಿಕ ನೇಮಕಾತಿ ಸಡೆಸಲಾಗುವುದು. ಆಸಕ್ತರು ಮಾರ್ಚ್ 11ರಂದು ಬೆಳಗ್ಗೆ 10 ಗಂಟೆಗೆ ಪಂಚಾಯಿತಿ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಪಳ್ಳಿಕ್ಕರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಯಂ ವಾಸ್ತವ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಕೇರಳ ಲೋಕಸೇವಾ ಆಯೋಗದ ಪ್ರಕಾರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಭೆಗೆ ಹಾಜರಾಗಬೇಕು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (0467 2272026)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.