ನಾಗ್ಪುರ: ಈ ವಾರದ ಆದಿಯಲ್ಲಿ ನಾಗ್ಪುರದಲ್ಲಿ ನಡೆದ ಗಲಭೆ ಸಂಬಂಧ ಮತ್ತೆ 14 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರ ಒಟ್ಟು ಸಂಖ್ಯೆ 105ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಗ್ಪುರ ಹಿಂಸಾಚಾರ: ಗಲಭೆ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ಸಮಿತಿ ಭೇಟಿ
10 ಅಪ್ರಾಪ್ತ ವಯಸ್ಸಿನವರು ಸೇರಿ 14 ಮಂದಿಯನ್ನು ಶುಕ್ರವಾರ ಬಂಧಿಸಲಾಗಿದೆ.
ಘಟನೆ ಸಂಬಂಧ ಇನ್ನೂ ಮೂರು ಎಫ್‌ಐಆರ್ ದಾಖಲಿಸಲಾಗಿದೆ ಎನ್ನುವುದು ನಾಗ್ಪುರ ಪೊಲೀಸ್ ಆಯುಕ್ತ ರವೀಂದ್ರ ಕುಮಾರ್ ಸಿಂಘಲ್ ನೀಡಿದ ಮಾಹಿತಿ.
ಉನ್ನತ ಮಟ್ಟದ ಸಭೆಯ ಬಳಿಕ ನಗರದ ವಿವಿಧ ಭಾಗಗಳಲ್ಲಿ ಕರ್ಫ್ಯೂ ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬಳಿಕ ನಾಗ್ಪುರದ ಸಿವಿಲ್ ಲೈನ್ಸ್‌ನಲ್ಲಿರುವ ಪೊಲೀಸ್ ಭವನದಲ್ಲಿ ಸಭೆ ನಡೆಸಿದ ಅವರು ಪರಿಸ್ಥಿತಿಯ ಅವಲೋಕನ ನಡೆಸಿದರು.
ಉಪ ಆಯುಕ್ತ ಶ್ರೇಣಿಯ ಮೂವರು ಸೇರಿದಂತೆ 33 ಪೊಲೀಸ್ ಸಿಬ್ಬಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಪ್ರಮುಖ ಆರೋಪಿ ಫಾಹಿಮ್ ಖಾನ್ ಸೇರಿ ಇತರರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.
ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ನಡೆಸಿದ ಪ್ರತಿಭಟನೆ ವೇಳೆ ಪವಿತ್ರ ಬರಹಗಳು ಇರುವ 'ಚಾದರ್' ಸುಟ್ಟುಹಾಕಲಾಗಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಾರ್ಚ್ 17 ರಂದು ನಾಗ್ಪುರದ ಹಲವಾರು ಭಾಗಗಳಲ್ಲಿ ದೊಡ್ಡ ಪ್ರಮಾಣದ ಕಲ್ಲು ತೂರಾಟ ನಡೆದಿತ್ತು. ಕೆಲವು ಕಿಡಗೇಡಿಗಳು ಬೆಂಕಿ ಹಚ್ಚಿದ್ದರು.