ನವದೆಹಲಿ: ಕುಲಾಂತರಿ ಸಾಸಿವೆ ತಳಿಯನ್ನು ಮುಕ್ತ ಪರಿಸರದಲ್ಲಿ ಬಳಸಲು ಷರತ್ತುಬದ್ಧ ಅನುಮತಿ ನೀಡಿ ಕೇಂದ್ರ ಸರ್ಕಾರ 2022ರಲ್ಲಿ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 15ಕ್ಕೆ ಮುಂದೂಡಿದೆ.
ಈ ಪ್ರಕರಣದಲ್ಲಿ ವಾದ ಮಂಡಿಸಲು ಕಾಲಾವಕಾಶ ಬೇಕು ಎಂದು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಹೇಳಿದ್ದನ್ನು ಪರಿಗಣಿಸಿ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ, ಸುಧಾಂಶು ಧುಲಿಯಾ ಮತ್ತು ಉಜ್ವಲ್ ಭೂಯಾನ್ ಅವರು ಇರುವ ತ್ರಿಸದಸ್ಯ ಪೀಠವು ವಿಚಾರಣೆ ಮುಂದೂಡಿತು.
ಸರ್ಕಾರದ ಅತ್ಯುನ್ನತ ಮಟ್ಟದಲ್ಲಿ ಈ ವಿಷಯದ ಕುರಿತಾಗಿ ಸರಣಿ ಚರ್ಚೆಗಳು ನಡೆಯುತ್ತಿವೆ ಎಂದು ವೆಂಕಟರಮಣಿ ಅವರು ತಿಳಿಸಿದರು.