HEALTH TIPS

ಇ.ಡಿಯಿಂದ ರಾಜಕಾರಣಿಗಳ ವಿರುದ್ಧ 193 ಪ್ರಕರಣ: 2ರಲ್ಲಿ ಶಿಕ್ಷೆ;ಸಂಸತ್ತಿಗೆ ಕೇಂದ್ರ

ನವದೆಹಲಿ: ಜಾರಿ ನಿರ್ದೇಶನಾಲಯವು(ಇ.ಡಿ) ಕಳೆದ 10 ವರ್ಷಗಳಲ್ಲಿ ಹಾಲಿ ಮತ್ತು ಮಾಜಿ ಸಂಸದರು ಹಾಗೂ ಶಾಸಕರು ಸೇರಿದಂತೆ ರಾಜಕಾರಣಿಗಳ ವಿರುದ್ಧ ಒಟ್ಟು 193 ಪ್ರಕರಣಗಳನ್ನು ದಾಖಲಿಸಿದೆ. ಅವುಗಳ ಪೈಕಿ ಎರಡು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ವಿರೋಧಿ ಫೆಡರಲ್ ಸಂಸ್ಥೆಯು ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ರಾಜಕಾರಣಿಗಳ ವಿರುದ್ಧ ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಹೊಂದಿರುವ ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದೆ. ಆದರೆ, ಅದರ ರಾಜ್ಯವಾರು ಡೇಟಾವನ್ನು ನಿರ್ವಹಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ

2015ರ ಏಪ್ರಿಲ್‌ನಿಂದ 2025ರ ಫೆಬ್ರುವರಿವರೆಗೆ ಇ.ಡಿ 193 ಪ್ರಕರಣಗಳನ್ನು ದಾಖಲಿಸಿದೆ ಎಂದು ಚೌಧರಿ ತಿಳಿಸಿದ್ದಾರೆ.

2016-17 ಮತ್ತು 2019-20ರ ಆರ್ಥಿಕ ವರ್ಷಗಳ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಯಾವುದೇ ಪ್ರಕರಣಗಳು ಖುಲಾಸೆಯಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.

ಆದರೆ, ಆರೋಪಿಗಳ ಹೆಸರುಗಳನ್ನು ಸಚಿವರು ಉಲ್ಲೇಖಿಸಲಿಲ್ಲ.

ಅಧಿಕೃತ ದಾಖಲೆಗಳ ಪ್ರಕಾರ, ಜಾರ್ಖಂಡ್‌ನ ಮಾಜಿ ಸಚಿವ ಹರಿ ನಾರಾಯಣ್ ರಾಯ್ ಅವರಿಗೆ 2017ರಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹5 ಲಕ್ಷ ದಂಡ ವಿಧಿಸಲಾಯಿತು. ಮತ್ತೊಬ್ಬ ಮಾಜಿ ಸಚಿವ ಅನೋಷ್ ಎಕ್ಕಾ ಅವರಿಗೆ 2020ರಲ್ಲಿ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹2 ಕೋಟಿ ದಂಡ ವಿಧಿಸಲಾಗಿದೆ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ವಿರುದ್ಧದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಇಬ್ಬರನ್ನೂ ಇ.ಡಿ ವಿಚಾರಣೆ ನಡೆಸಿತ್ತು. ಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯಗಳು ವಿಧಿಸಿದ ಶಿಕ್ಷೆಯ ವಿರುದ್ಧ ಇಬ್ಬರು ಶಿಕ್ಷೆಗೊಳಗಾದ ರಾಜಕಾರಣಿಗಳು ಮೇಲ್ಮನವಿ ಸಲ್ಲಿಸಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ.

ದತ್ತಾಂಶದ ಪ್ರಕಾರ, 2022-23ರ ಆರ್ಥಿಕ ವರ್ಷದಲ್ಲಿ ಮಾಜಿ ಮತ್ತು ಹಾಲಿ ಶಾಸಕರ ವಿರುದ್ಧ ಗರಿಷ್ಠ 32 ಪ್ರಕರಣಗಳನ್ನು ಇ.ಡಿ ದಾಖಲಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries