ನವದೆಹಲಿ: ಭಾರತವು ಪ್ರಸ್ತುತ ಆರ್ಥಿಕ ವರ್ಷದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ದಾಟಿದೆ. ಇದು ನಿಜಕ್ಕೂ ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಮಹತ್ವದ ಮೈಲಿಗಲ್ಲನ್ನು ದಾಟಿರುವುದು ಇಂಧನ ಕ್ಷೇತ್ರದಲ್ಲಿ ನಾವು ಹೊಂದಿರುವ ಬದ್ಧತೆಯನ್ನು ತೋರಿಸುತ್ತದೆ.