ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಜಿಲ್ಲೆಗಳಲ್ಲಿ ಮಂಗಳವಾರದ ವರೆಗೆ ಬಿಸಿಗಾಳಿ ಬೀಸಲಿದೆ. ರಾಜ್ಯದಲ್ಲಿ ಗಂಗಾ ಬಯಲು ಪ್ರದೇಶದಲ್ಲಿರುವ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಲಿದೆ ಎದು ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಗಂಗಾ ಬಯಲು ಪ್ರದೇಶದ ಎಲ್ಲ ಜಿಲ್ಲೆಗಳಲ್ಲಿ ಮಾರ್ಚ್ 20ರಿಂದ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಇಲಾಖೆ ಅಂದಾಜಿಸಿದೆ.
ಪಶ್ಚಿಮ ಜಿಲ್ಲೆಗಳಾದ ಪುರಲಿಯಾ, ಬಂಕುರಾ ಮತ್ತು ಪಶ್ಚಿಮ ಬರ್ಧಮಾನ್‌ನಲ್ಲಿ ಮಂಗಳವಾರದ ವರೆಗೆ ಬಿಸಿಗಾಳಿ ಬೀಸಲಿದೆ.
ಕೋಲ್ಕತ್ತದಲ್ಲಿ ಕನಿಷ್ಠ ತಾಪಮಾನ 26.5 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಇದು ಸರಾಸರಿಗಿಂತ 3.9 ಡಿಗ್ರಿಯಷ್ಟು ಹೆಚ್ಚು. ಗರಿಷ್ಠ ತಾಪಮಾನ 33.7 ಡಿಗ್ರಿ ಸೆಲ್ಸಿಯಸ್ ಇರಲಿದೆ ಎನ್ನಲಾಗಿದೆ.