ಸಿಯೋಲ್: ದಕ್ಷಿಣ ಕೊರಿಯಾದ ದಕ್ಷಿಣ ಭಾಗದಲ್ಲಿ ಕಾಣಿಸಿಕೊಂಡಿರುವ ಕಾಳ್ಗಿಚ್ಚಿನಿಂದಾಗಿ ಸಂಭವಿಸಿದ ಅವಘಡಗಳಲ್ಲಿ 24 ಜನರು ಮೃತಪಟ್ಟಿದ್ದು, 26 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಅವಘಡಗಳಲ್ಲಿ 200ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದ್ದು, 27,000 ಜನರನ್ನು ಸ್ಥಳಾಂತರಿಸಲಾಗಿದೆ.
ಕಾಳ್ಗಿಚ್ಚು ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಹೆಲಿಕಾಪ್ಟರ್‌ವೊಂದು ಉಯಿಸೆಯಾಂಗ್ ಪಟ್ಟಣ ಬಳಿ ಪತನಗೊಂಡಿದ್ದು, ಪೈಲಟ್‌ವೊಬ್ಬರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.