ಪೆರ್ಲ: ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂ.ರೆಸಿಡೆಂಟ್ ಹುದ್ದೆಗಳ ನೇಮಕಾತಿಗಾಗಿ ಮಾ.27ರಂದು ಬೆಳಗ್ಗೆ 11ಕ್ಕೆ ಮೆಡಿಕಲ್ ಕಾಲೇಜು ಪ್ರಾಂಶುಪಾಲರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಎಂಬಿಬಿಎಸ್, ಟಿಸಿಎಂಸಿ ನೋಂದಣಿಯಿರುವ ಅಭ್ಯರ್ಥಿಗಳನ್ನು ಗರಿಷ್ಠ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗುವುದು. ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಹತೆ ಮತ್ತು ಕೆಲಸದ ಅನುಭವವನ್ನು ಸಾಬೀತುಪಡಿಸುವ ಪ್ರಮಾಣಪತ್ರಗಳು ಹಾಗೂ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವಂತೆ ಮೆಡಿಕಲ್ ಕಾಲೇಜು ಪ್ರಾಂಶುಪಾಲರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.