ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಕೆಲ ದಿನಗಳ ಹಿಂದೆ ನಡೆದ ಗಲಭೆಗೆ ಸಂಬಂಧಿಸಿದಂತೆ ಶುಕ್ರವಾರ 14 ಜನರನ್ನು ಬಂಧಿಸಿ ಮೂರು ಹೊಸ ಎಫ್‌ಐಆರ್‌ಗಳನ್ನು ಪೊಲೀಸರು ದಾಖಲಿಸಿದ್ದಾರೆ. ಇದರಿಂದಾಗಿ ಬಂಧಿತರ ಸಂಖ್ಯೆ 105ಕ್ಕೆ ಏರಿದೆ.
ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಾಗ್ಪುರದಲ್ಲಿ ಮಾರ್ಚ್ 17ರಂದು ಹಿಂದೂ ಸಂಘಟನೆಗಳು ನಡೆಸಿದ ಪ್ರತಿಭಟನೆಯು ಹಿಂಸಾಚಾರಕ್ಕೆ ಕಾರಣವಾಗಿತ್ತು.