ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 30 ರಂದು ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಮಾಧವ್ ನೇತ್ರಾಲಯ ಪ್ರೀಮಿಯಂ ಸೆಂಟರ್‌ನ ವಿಸ್ತರಣಾ ಕಟ್ಟಡಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೆವಾರ್ ಮತ್ತು ಅವರ ಉತ್ತರಾಧಿಕಾರಿ ಎಂ.ಎಸ್. ಗೋಲ್ವಾಲ್ಕರ್ ಅವರ ಅಂತಿಮ ವಿಶ್ರಾಂತಿ ಸ್ಥಳವಾದ ರೇಶಿಂಬಾಗ್‌ನಲ್ಲಿರುವ ಪೂಜ್ಯ ಸ್ಮೃತಿ ಮಂದಿರಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ.
ಮಾರ್ಚ್ 30 ರಂದು ಮೋದಿ ಈ ಸ್ಮಾರಕಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮಹಾರಾಷ್ಟ್ರ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಅವರು ಗುರುವಾರ ನಾಗ್ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ, ಮಾಧವ್ ನೇತ್ರಾಲಯ ಪ್ರೀಮಿಯಂ ಸೆಂಟರ್‌ನ ವಿಸ್ತರಣಾ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಅವರು ಹೇಳಿದರು.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
"ಪ್ರಧಾನಿಯೊಬ್ಬರು ಡಾ. ಹೆಡ್ಗೆವಾರ್ ಸ್ಮೃತಿ ಮಂದಿರ ಆವರಣ ಅಥವಾ ಆರ್ ಎಸ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು" ಎಂದು ಆರ್‌ಎಸ್‌ಎಸ್ ಇತಿಹಾಸದ ಬಗ್ಗೆ ಚೆನ್ನಾಗಿ ತಿಳಿದಿರುವ ವಿದ್ವಾಂಸರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
2007 ರಲ್ಲಿ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಈ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಆದರೆ ಆ ಸಮಯದಲ್ಲಿ ಅವರು ಪ್ರಧಾನಿಯಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.