ನೈನಿತಾಲ್: ರಿಷಿಕೇಶ-ಭನಿಯಾವಾಲಾ ರಸ್ತೆ ಅಗಲೀಕರಣಕ್ಕಾಗಿ 3,000 ಮರಗಳನ್ನು ಕಡಿಯುವುದಕ್ಕೆ ಉತ್ತರಾಖಂಡ ಹೈಕೋರ್ಟ್ ಬುಧವಾರ ತಡೆ ನೀಡಿದೆ.
ಡೆಹ್ರಾಡೂನ್ ನಿವಾಸಿ ರೇಣು ಪಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ನ್ಯಾಯಮೂರ್ತಿ ಆಶಿಶ್ ನೈಥಾನಿ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಅಭಿಜಯ್ ನೇಗಿ, ರಸ್ತೆ ಅಗಲೀಕರಣದಿಂದ ಆನೆ ಕಾರಿಡಾರ್‌ಗಳಿಗೆ ಅಡ್ಡಿಯಾಗುತ್ತದೆ ಎಂದು ನ್ಯಾಯಾಲಯದ ಮುಂದೆ ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರ, ಆನೆಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ.
ಅದಾಗ್ಯೂ, ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ತನ್ನ ಮುಂದೆ ಹಾಜರುಪಡಿಸುವಂತೆ ನ್ಯಾಯಪೀಠ ಸರ್ಕಾರಕ್ಕೆ ಆದೇಶಿಸಿದೆ.
ಇದೇ ರೀತಿಯ ಪ್ರಕರಣದಲ್ಲಿ ನ್ಯಾಯಾಲಯವು ಶಿವಾಲಿಕ್ ಆನೆ ಮೀಸಲು ಪ್ರದೇಶಕ್ಕೆ ಈ ಹಿಂದೆ ರಕ್ಷಣೆ ನೀಡಿತ್ತು.