ಕರಾಚಿ/ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ್ದ ಉಗ್ರರು ಒಟ್ಟು 21 ಮಂದಿ ಪ್ರಯಾಣಿಕರನ್ನು ಹಾಗೂ ಅರೆಸೇನಾ ಪಡೆಯ ನಾಲ್ಕು ಮಂದಿಯನ್ನು ಹತ್ಯೆ ಮಾಡಿದ್ದಾರೆ.
ರೈಲು ಪ್ರಯಾಣಿಕರನ್ನು ರಕ್ಷಿಸುವ ಉದ್ದೇಶದಿಂದ ನಡೆಸಿದ ಸೇನಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.