ಇಂಫಾಲ್: ನೆರೆಯ ದೇಶಗಳಾದ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಪ್ರಬಲ ಭೂಕಂಪ ವರದಿಯಾದ ಬೆನ್ನಲ್ಲೇ ಮಣಿಪುರದ ನೋನಿ ಜಿಲ್ಲೆಯಲ್ಲಿ ಶನಿವಾರ ಲಘು ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ ತೀವ್ರತೆ ಪ್ರಮಾಣ 3.8ರಷ್ಟು ದಾಖಲಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪನದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾಗಿರುವುದರ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭಿಸಿಲ್ಲ.
ಮಧ್ಯಾಹ್ನ 2.31ರ ಸುಮಾರಿಗೆ ಭೂಮಿ ಕಂಪಿಸಿದ್ದು, ಕೇಂದ್ರ ಬಿಂದುವಿನಲ್ಲಿ ಸುಮಾರು 10 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಶುಕ್ರವಾರ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ(7.7 ತೀವ್ರತೆ) ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಅಪಾರ ಹಾನಿಯಾಗಿದೆ. ಸೇತುವೆಗಳು, ಬಹು ಅಂತಸ್ತಿನ ಕಟ್ಟಡಗಳು ನೆಲಕ್ಕುರುಳಿವೆ. ಥ್ಯಾಯ್ಲೆಂಡ್‌ನಲ್ಲಿಯೂ ಪರಿಸ್ಥಿತಿ ಭೀಕರವಾಗಿದೆ.