ಕಾಸರಗೋಡು: ಹದಿನಾರರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಅಪರಾಧಿ ಇಡುಕ್ಕಿ ಜಿಲ್ಲೆಯ ಉಡುಂಬಚ್ಚಾಲ ಕಲ್ಲುಂಕ್ಲಾಕಲ್ ನಿವಾಸಿ ಶಾಮಿಲ್ ಕೆ. ಮ್ಯಾಥ್ಯೂ ಎಂಬಾತನಿಗೆ ಕಾಸರಗೋಡು ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮುರಮೇಶ್ ಚಂದ್ರಭಾನು ಅವರು ವಿವಿಧ ಸೆಕ್ಷನ್‍ಗಳಲ್ಲಾಗಿ 40ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 2ಲಕ್ಷ ರೂ. ದಂಡ ವಿಧಿಸಿ ತೀರ್ಪಿತ್ತಿದ್ದಾರೆ.
ಪೋಕ್ಸೋ ಅನ್ವಯ 20ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ, ಐಪಿಸಿ ಸೆಕ್ಷನ್ 376(3)ಅನ್ವಯ 20ವರ್ಷ ಜೈಲು ಶಿಕ್ಷೆ ಹಾಗೂ 1ಲಕ್ಷ ರೂ. ದಂಡ ವಿಧಿಸಲಾಗಿದೆ. 2016 ನವೆಂಬರ್ ತಿಂಗಳ ಒಂದು ದಿನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಮರ್‍ಮೂಲೆಯ 16ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಶಾಮಿಲ್ ಕೆ. ಮ್ಯಾಥ್ಯೂ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ವಿದ್ಯಾನಗರ ಠಾಣೆಯ ಅಂದಿನ ಇನ್ಸ್‍ಪೆಕ್ಟರ್ ಬಾಬು ಪೆರಿಙÉೂೀತ್ ಕೇಸು ದಾಖಲಿಸಿ ತನಿಖೆ ನಡೆಸಿದ್ದರು.