ನವದೆಹಲಿ: ಕಳೆದ ಐದು ವರ್ಷಗಳಲ್ಲಿ ದೇಶದಿಂದ ಹಣ್ಣುಗಳ ರಫ್ತು ಪ್ರಮಾಣವು ಶೇ 47.5ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಯುಎಇ ಮತ್ತು ಆಸ್ಟ್ರೇಲಿಯಾದ ಜೊತೆಗೆ ಭಾರತ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದವು ಹಣ್ಣುಗಳ ರಫ್ತು ಪ್ರಮಾಣದ ಹೆಚ್ಚಳಕ್ಕೆ ನೆರವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು, ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿ ಹಣ್ಣುಗಳ ಗುಣಮಟ್ಟ ಕಾಯ್ದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ದೇಶದಿಂದ ಪ್ರಮುಖವಾಗಿ ಮಾವು, ದ್ರಾಕ್ಷಿ, ಬಾಳೆಹಣ್ಣು, ಸೇಬು, ಅನಾನಸ್, ದಾಳಿಂಬೆ ಮತ್ತು ಕಲ್ಲಂಗಡಿಯನ್ನು ರಫ್ತು ಮಾಡಲಾಗುತ್ತದೆ.