ಮುಂಬೈ: ಡಿಜಿಟಲ್ ಆಡಳಿತಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು 'ಆಪ್ಲೆ ಸರ್ಕಾರ' (ನಮ್ಮ ಸರ್ಕಾರ) ಪೋರ್ಟಲ್‌ನಿಂದ 500ಕ್ಕೂ ಹೆಚ್ಚು ಸೇವೆಗಳನ್ನು ವ್ಯಾಟ್ಸ್‌ಆಯಪ್ ಮೂಲಕ ಒದಗಿಸುವುದಾಗಿ ಘೋಷಿಸಿದೆ.
ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು 'ಮುಂಬೈ ಟೆಕ್ ವೀಕ್ 2025' ಅನ್ನು ಉದ್ಘಾಟಿಸಿದ್ದಾರೆ.
ಈ ವೇಳೆ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ವ್ಯಾಟ್ಸ್‌ಆಯಪ್ ಮಾಲೀಕತ್ವದ ಮೆಟಾ ನಡುವಿನ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಇದೇ ವೇಳೆ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ನಡುವೆ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಭೂಮಿ ಹಂಚಿಕೆ ಮಾಡುವ ಒಪ್ಪಂದಕ್ಕೂ ಫಡಣವೀಸ್ ಸಹಿ ಹಾಕಿದ್ದಾರೆ.
ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನಕ್ಕೆ ಹೆಚ್ಚು ಆದ್ಯತೆ ನೀಡುವ ನಿಟ್ಟಿನಲ್ಲಿ ತಂಡದ ಸಹಯೋಗದೊಂದಿಗೆ 'Knowledge AI Hub' ಅನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ವಸ್ತುಸಂಗ್ರಹಾಲಯಗಳನ್ನು ಸ್ಥಾಪಿಸುವುದಾಗಿಯೂ ಅವರು ಭರವಸೆ ನೀಡಿದ್ದಾರೆ.