ಢಾಕಾ: ಬಾಂಗ್ಲಾದೇಶದ ಢಾಕಾ ಮತ್ತು ಚಟ್ಟೋಗ್ರಾಮ ಸೇರಿದಂತೆ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ತೀವ್ರತೆ ಪ್ರಮಾಣ 7.3ರಷ್ಟು ದಾಖಲಾಗಿದೆ. ಆದರೆ, ಇದುವರೆಗೂ ಸಾವುನೋವು ಹಾಗು ಆಸ್ತಿಪಾಸ್ತಿ ಹಾನಿಯಾದ ಕುರಿತು ಯಾವುದೇ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂಗ್ಲಾದೇಶ ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದು ಮಧ್ಯಾಹ್ನ 12:25ಕ್ಕೆ ಭೂಕಂಪ ಸಂಭವಿಸಿದೆ. ಬಾಂಗ್ಲಾದೇಶದ ಗಡಿ ಸಮೀಪದ ಮ್ಯಾನ್ಮಾರ್‌ನ ಮಂಡಲೆಯಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಇದು ಢಾಕಾದಿಂದ 597 ಕಿಲೋಮೀಟರ್ ದೂರದಲ್ಲಿದೆ.
ಮ್ಯಾನ್ಮಾರ್‌ನಲ್ಲಿಯೂ ಪ್ರಬಲ ಭೂಕಂಪ
ಮ್ಯಾನ್ಮಾರ್‌ನಲ್ಲಿ ಇಂದು 7.7 ತೀವ್ರತೆಯ ಪ್ರಬಲ ಭೂಕಂಪ ಸಮಭವಿಸಿದೆ. ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿವೆ.
ಪ್ರಾಥಮಿಕ ವರದಿಗಳ ಪ್ರಕಾರ, ಮ್ಯಾನ್ಮಾರ್‌ನ ಮಂಡಲೆ ನಗರದ ಬಳಿ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಜರ್ಮನಿಯ ಜಿಎಫ್‌ಝಡ್ ಭೂವಿಜ್ಞಾನ ಕೇಂದ್ರ ತಿಳಿಸಿದೆ.