HEALTH TIPS

9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್, ರೋಚಕ ಕ್ಷಣಕ್ಕೆ ಸಾಕ್ಷಿಯಾದ ಫ್ಲೋರಿಡಾ ಸಮುದ್ರ

Top Post Ad

Click to join Samarasasudhi Official Whatsapp Group

Qries

ಫ್ಲೋರಿಡಡಾ: ತಾಂತ್ರಿಕ ದೋಷದ ಕಾರಣ ಬಾಹ್ಯಾಕಾಶದಲ್ಲೇ ಕಳೆದ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತಂದಿದೆ. ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಇಂದು(ಮಾ.19) ಬೆಳಗಿನ ಜಾವ 3.27ರ ಸುಮಾರಿಗೆ ಫ್ಲೋರಿಡಾದ ಸಮುದ್ರದ ಮೇಲೆ ಲ್ಯಾಂಡ್ ಆಗಿದ್ದಾರೆ. ಬಳಿಕ ನಾಸಾ ವಿಜ್ಞಾನಿಗಳ ತಂಡ ಸಮುದ್ರದಿಂದ ಸುರಕ್ಷಿತವಾಗಿ ನೌಕೆಯನ್ನು ದಡಕ್ಕೆ ಕರೆತರಲಾಗುತ್ತಿದೆ. ಭಾರತೀಯ ಕಾಲಮಾನದ ಪ್ರಕಾರ ಮಂಗಳವಾರ ಬೆಳಗ್ಗೆ 10:35ಕ್ಕೆ ಫ್ರೀಡಂ ಡ್ರಾಗನ್ ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟಿತು. ನಿಕ್ ಹೇಗ್, ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೊರ್ಬುನೊವ್ ನೌಕೆಯಲ್ಲಿದ್ದರು. ಭಾರತೀಯ ಕಾಲಮಾನದ ಪ್ರಕಾರ ಸುಮಾರು 3.27ಕ್ಕೆ ಡ್ರಾಗನ್ ನೌಕೆಯು ಮೆಕ್ಸಿಕನ್ ಕೊಲ್ಲಿಯಲ್ಲಿ ಫ್ಲೋರಿಡಾದ ಕರಾವಳಿಗೆ ಸಮೀಪವಿರುವ ಸಮುದ್ರದಲ್ಲಿ ಲ್ಯಾಂಡ್ ಆಯಿತು. ಇದೀಗ ನೌಕೆಯನ್ನು ನಾಸಾ ಸಿಬ್ಬಂದಿಗಳ ತಂಡ ಸಮುದ್ರದಿಂದ ಮೇಲಕ್ಕೆತ್ತಲಾಗಿದೆ. ಶೀಘ್ರದಲ್ಲೇ ನೌಕೆಯಿಂದ ಹೊರಬರಲಿರುವ ಸುನೀತಾ ವಿಲಿಯಮ್ಸ್ ಹಾಗೂ ಇತರ ಗಗನಯಾತ್ರಿಗಳ ತಪಾಸಣೆ ನಡೆಯಲಿದೆ.

ಕಳೆದ 9 ತಿಂಗಳಿನಿಂದ ಇಂದಲ್ಲ, ನಾಳೆ ಎಂದು ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿದ್ದ ಇಬ್ಬರು ಗಗನಯಾತ್ರಿಗಳ ಆಗಮನ ಅಮೆರಿಕ, ಭಾರತ ಮಾತ್ರವಲ್ಲ, ಇದೀ ವಿಶ್ವವೇ ಸಂಭ್ರಮಿಸಿದೆ. ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲು ಭಾರತದ ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲಾಗಿತ್ತು. ಹಲವರು ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಲು ಪ್ರಾರ್ಥಿಸಿದ್ದರು. ಇದೀಗ ಪ್ರಾರ್ಥನೆ ಫಲಿಸಿದೆ. ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಸುರಕ್ಷಿತವಾಗಿ ತಲುಪಿದ್ದಾರೆ.

ಸಮುದ್ರದಲ್ಲಿ ಇಳಿಯುತ್ತಿದ್ದಂತೆ ತ್ವರಿತ ಕಾರ್ಯಾಚರಣೆ
ಸುನೀತ್ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಹೊತ್ತು ಬಂದು ನೌಕೆ ಫ್ಲೋರಿಡಾದಲ್ಲಿರುವ ಅಟ್ಲಾಂಟಿಕ್ ಸಮುದ್ರದಲ್ಲಿ ಇಳಿದಿತ್ತು. ನೌಕೆ ಸಮುದ್ರದಲ್ಲಿ ಇಳಿಯುತ್ತಿದ್ದಂತೆ ನಾಸಾ ಸಿಬ್ಬಂದಿಗಳು, ಸ್ಪೇಸ್ ಎಕ್ಸ್ ಸಿಬ್ಬಂದಿಗಳು, ವಿಶೇಷ ಹಡುಗು, ರಕ್ಷಣೆಗೆ ಧಾವಿಸಿದೆ. ಮಳುಗು ತಜ್ಞರು ಸೇರಿದಂತೆ ಹಲವು ಸಿಬ್ಬಂದಿಗಳು ಬಾಹ್ಯಾಕಾಶ ನೌಕೆಯನ್ನು ರಕ್ಷಣಾ ಹಡಗಿನ ಮೂಲಕ ರಕ್ಷಿಸಿದ್ದಾರೆ. ಬಳಿಕ ನೌಕೆಯ ಹ್ಯಾಚ್ ತೆಗೆದು ಗಗನಯಾತ್ರಿಗಳನ್ನು ಸುರಕ್ಷಿತವಾಗಿ ಹೊರತರರಲಾಗುತ್ತದೆ. ಕಳೆದ 9 ತಿಂಗಳು ಗುರುತ್ವಾಕರ್ಷ ಬಲವಿಲ್ಲದೆ ಕಳೆದ ಗಗನಯಾತ್ರಿಗಳು ಭೂಮಿ ಮೇಲೆ ಗುರುತ್ವಾಕರ್ಷಣೆಗೆ ಸಿಲುಕಿಕೊಂಡಾಗ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.

8 ದಿನದ ಮಿಷನ್ 9 ತಿಂಗಳಿಗೆ ವಿಸ್ತರಣೆ
ಬೋಯಿಂಗ್ ಸ್ಟಾರ್‌ಲೈನರ್ ನೌಕೆ ಮೂಲಕ 8 ದಿನಗಳ ಅಧ್ಯಯನ ಮಿಷನ್‌ಗಾಗಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶಕ್ಕೆ ತೆರಳಿದ್ದರು. ಜೂನ್ 5 ರಂದು ನೌಕೆ ಉಡಾವಣೆಗೊಂಡಿತ್ತು. ನಾಸಾ ವೇಳಾಪಟ್ಟಿ ಪ್ರಕಾರ ಜೂನ್ 14 ರಂದು ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಬೇಕಿತ್ತು. ಆದರೆ ಬೋಯಿಂಗ್ ಸ್ಟಾರ್‌ಲೈನ್ ನೌಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಹೀಲಿಯಂ ಸೋರಿಕೆ ಸರಿಪಡಿಸುವ ಪ್ರಯತ್ನಗಳು ನಡೆದಿತ್ತು. ಹೀಗಾಗಿ ಗಗನಯಾತ್ರಿಗಳು ಮರಳುವ ದಿನಾಂಕ ಹಂತ ಹಂತವಾಗಿ ಮುಂದೂಡುತ್ತಲೇ ಹೋಗಿತ್ತು.

ಆಗಸ್ಟ್ 24ರಂದು ಸ್ಟಾರ್‌ಲೈನರ್ ಭೂಮಿಗೆ ಮರಳಿತ್ತು. ಆದರೆ ಗಗನಯಾತ್ರಿಗಳು ಪ್ರಯಾಣಿಸುವಂತಿರಲಿಲ್ಲ. ಹೀಗಾಗಿ ಮರಳುವಿಕೆ ಮತ್ತಷ್ಟು ವಿಳಂಬಗೊಂಡಿತು. ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಜೊತೆ ಸೇರಿ ನಾಸಾ ಮಾರ್ಚ್ ತಿಂಗಳಲ್ಲಿ ಗನನಯಾತ್ರಿಗಳ ಕರೆತರಲು ಪ್ಲಾನ್ ಮಾಡಿತ್ತು. ಇದರಂತೆ ಇದೀಗ ಇಬ್ಬರು ಗನನಯಾತ್ರಿಗಳು ಭೂಮಿಗೆ ಲ್ಯಾಂಡ್ ಆಗಿದ್ದಾರೆ.

Below Post Ad

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries