ಕಾಸರಗೋಡು : ಜಿಲ್ಲೆಯ ಎಲ್ಲಾ 983 ಬೂತ್‍ಗಳಲ್ಲಿ ಚುನಾವಣೆ ಗ್ರಾಮ ಸಭೆ ನಡೆಯಿತು. ಗ್ರಾಮ ಸಭೆಗಳಲ್ಲಿಬಂದಿದ್ದ ರಾಜಕೀಯ ಪಕ್ಷಗಳ ಏಜೆಂಟರು ಹಾಗೂ ಮತದಾರರ ಮುಂದೆ ಬೂತ್ ಮಟ್ಟದ ಅಧಿಕಾರಿ ಮತದಾರರ ಪಟ್ಟಿಯ ಬಗ್ಗೆ ಮಾಃಈತಿ ನೀಡಿದರು. ಅನರ್ಹವಾಗಿ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಸೇರ್ಪಡೆಗೊಂಡಾಗ ಸದನ ಆಕ್ಷೇಪ ವ್ಯಕ್ತಪಡಿಸಿ, ಈ ಹೆಸರನ್ನು ಮುಂದಿನ ದಿನಗಳಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಯಿತು. ಜತೆಗೆ 2026 ರ ವಿಧಾನಸಭಾ ಚುನಾವಣೆಯಲ್ಲಿ ಬಳಸಲು ಪರಿಷ್ಕøತ ಮತದಾರರ ಪಟ್ಟಿ ಸಿದ್ಧವಾಗಲಿದೆ. ಕಾಸರಗೋಡು ಮಂಡಲದ ಡಯಟ್ ಮಾಯಿಪ್ಪಾಡಿಯಲ್ಲಿ ಬೂತ್ ನಂ.18ರಲ್ಲಿ 'ಚುನಾವಣಾ ಗ್ರಾಮ ಸಭೆ 2.0' ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ನೆರವೇರಿಸಿದರು. ಚುನಾವಣೆ ಗ್ರಾಮ ಸಭೆ 2.0 ರ ಯಶಸ್ಸಿಗೆ ಎಲ್ಲಾಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಹಾಗೂ ಮತದಾರರ ಸಹಕಾರ ಉತ್ತಮವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಅಖಿಲ್‍ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಬಿ.ಎಲ್. ಒ.ಸಿ.ಸಿಂಧು ಮತದಾರರ ಪಟ್ಟಿಯನ್ನು ಓದಿದರು. ಕಳೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿನೂತನ ಕಲ್ಪನೆ, ಗ್ರಾಮ ಸಭೆ ಮಾದರಿಯಲ್ಲಿ ಇಡೀ ರಾಜ್ಯದಲ್ಲಿ ಮಾರ್ಚ್ ತಿಂಗಳಿನಲ್ಲಿ ಚುನಾವಣೆ ಮುಖ್ಯ ಚುನಾವಣಾಧಿಕಾರಿಗಳು ಗ್ರಾಮ ಸಭೆಗಳನ್ನು ನಡೆಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.