HEALTH TIPS

ಮತದಾರರ ಪಟ್ಟಿ ಕುರಿತು ಲೋಕಸಭೆಯಲ್ಲಿ ಚರ್ಚೆಗೆ ರಾಹುಲ್ ಗಾಂಧಿ ಪಟ್ಟು

ನವದೆಹಲಿ: ಮತದಾರರ ಪಟ್ಟಿಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಎಲ್ಲಾ ವಿಪಕ್ಷಗಳು ಈ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸುತ್ತಿವೆ ಎಂದು ಹೇಳಿದ್ದಾರೆ.

'ಮತದಾರರ ಪಟ್ಟಿಯನ್ನು ಸರ್ಕಾರ ರಚಿಸುವುದಿಲ್ಲ ಎಂಬ ನಿಮ್ಮ ವಾದವನ್ನು ನಾವು ಒಪ್ಪಿಕೊಳ್ಳುತ್ತೇವೆ. ಅಂತೆಯೇ ಈ ವಿಷಯದ ಬಗ್ಗೆ ಚರ್ಚೆ ನಡೆಸಲು ನಾವು ಆಗ್ರಹಿಸುತ್ತೇವೆ' ಎಂದಿದ್ದಾರೆ.

ದೇಶದಾದ್ಯಂತ ಮತದಾರರ ಪಟ್ಟಿಯ ಕುರಿತು ಪ್ರಶ್ನೆಗಳು ಎದ್ದಿವೆ. ಮಹಾರಾಷ್ಟ್ರ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿಯೂ ವಿರೋಧ ಪಕ್ಷಗಳು ಈ ಬಗ್ಗೆ ಪ್ರಶ್ನೆ ಮಾಡುತ್ತಿವೆ' ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್‌, ಮತದಾರರ ಪಟ್ಟಿ ದೋಷದಿಂದ ಕೂಡಿದೆ ಎಂದು ಆರೋಪಿಸಿದ್ದರು.

ನಮ್ಮ ಸರ್ಕಾರದ ನಿಯೋಗವು ಹೊಸದಾಗಿ ನೇಮಕಗೊಂಡಿರುವ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿದ್ದರು.

'ಮತದಾರರ ಪಟ್ಟಿಯಲ್ಲಿ ಗಂಭೀರವಾದ ನೂನ್ಯತೆಯಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಗಳಲ್ಲಿ ಈ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿದ್ದವು. ಮುಂದಿನ ವರ್ಷ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿದ್ದು, ಅಲ್ಲಿಯೂ ಇದನ್ನು ಮುಂದುವರಿಸಲು ಯತ್ನಿಸುತ್ತಿದ್ದಾರೆ' ಎಂದು ರಾಯ್‌ ಹೇಳಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries