ತಿರುವನಂತಪುರ: ಸಂಕಷ್ಟಗಳ ನಡುವೆಯೂ ಮನೆಗೆ ಮರಳುತ್ತಿರುವ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರಂತೆಯೇ ಕೇರಳ ಸರ್ಕಾರವು ಆರ್ಥಿಕ ಸವಾಲುಗಳನ್ನು ದಿಟ್ಟವಾಗಿ ಎದುರಿಸುತ್ತಿದೆ ಎಂದು ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಮಂಗಳವಾರ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಾಲ ನೀಡುವ ಮಿತಿಗಳನ್ನು ಕಡಿತಗೊಳಿಸಿರುವುದು ಹಾಗೂ ರಾಜ್ಯಕ್ಕೆ ನೀಡುವ ಅನುದಾನಗಳಲ್ಲಿ ತೀವ್ರ ಕಡಿತಗೊಳಿರುವುದರಿಂದ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಬಗ್ಗೆ ಕೇಂದ್ರವು ನಿರಾಸಕ್ತಿ ಧೋರಣೆಯನ್ನು ಹೊಂದಿದೆ. ಇದರ ಹೊರತಾಗಿಯೂ ರಾಜ್ಯ ಸರ್ಕಾರ ಆರ್ಥಿಕ ಸವಾಲುಗಳನ್ನು ದಿಟ್ಟವಾಗಿ ಎದುರಿಸುತ್ತಿದೆ. ಆರ್ಥಿಕವಾಗಿ ಬಲಿಷ್ಠ ಸ್ಥಿತಿಯಲ್ಲಿದ್ದ ತೆಲಂಗಾಣ ರಾಜ್ಯವೂ ಸಹ ಕೇಂದ್ರ ಸರ್ಕಾರದ ಹಣಕಾಸು ನೀತಿಯಿಂದಾಗಿ ಈಗ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಹೇಳಿದ್ದಾರೆ.
ಸುಮಾರು ಒಂದು ವರ್ಷದಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಸಿಲುಕಿಕೊಂಡಿರುವ ನಾಸಾ ಗಗನಯಾನಿ ಸುನೀತಾ ವಿಲಿಯಮ್ಸ್, ಮತ್ತೊಬ್ಬ ಗಗನಯಾನಿ ಬುಚ್ ಜೊತೆಗೆ ಇಂದು ರಾತ್ರಿ ಭೂಮಿಗೆ ಮರಳಲು ಸಮಯ ನಿಗದಿಯಾಗಿದೆ.