ಪಣಜಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗೋವಾ ಮುಖ್ಯಮಂತ್ರಿ ಸೇರಿದಂತೆ ವಿವಿಧ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಸಂಪುಟ ಪುನಾರಚನೆ ಸಂಬಂಧ ಮಾತುಕತೆ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಗೋವಾದಲ್ಲಿ ಮುಖ್ಯಮಂತ್ರಿ ಸೇರಿ 12 ಜನರಿಗೆ ಸಂಪುಟ ಸೇರಲು ಅವಕಾಶವಿದೆ.
ಬಿಜೆಪಿಯ 28 ಶಾಸಕರು, ಇಬ್ಬರು ಎಂಜಿಪಿ ಶಾಸಕರು ಹಾಗೂ ಮೂವರು ಪಕ್ಷೇತರ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಬಿಜೆಪಿಯು 11 ಸಚಿವ ಸ್ಥಾನಗಳನ್ನು ಹೊಂದಿದ್ದು ಎಂಜಿಪಿಗೆ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದೆ.
ಕೆಲ ಸಚಿವರನ್ನು ಕೈಬಿಟ್ಟು ಹಿರಿಯರು ಹಾಗೂ ಯುವ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ ಮೂಲಗಳು ಹೇಳಿವೆ.