ಕಾಸರಗೋಡು: ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಕುಂಬಳೆ ಸೀಮೆಯ ಅತಿ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಾಲಯಕ್ಕೆ ಬುಧವಾರ ಭೇಟಿ ನೀಡಿದರು.
ದೇವಾಲಯದ ಮುಖ್ಯ ಪ್ರತಿಷ್ಠೆ ಶ್ರೀ ಮದನಂತೇಶ್ವರ ಮತ್ತು ಶ್ರೀ ಸಿದ್ಧಿವಿನಾಯಕ ದೇವರ ದರ್ಶನ ಪಡೆದರು. ಈ ಸಂದರ್ಭ ಭರದಿಂದ ಸಾಗುತ್ತಿರುವ ಸಮಗ್ರ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿ ಮಂತ್ರಾಕ್ಷತೆ ನೀಡಿದರು. ಶ್ರೀ ಕ್ಷೇತ್ರ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕುಳೂರುಕನ್ಯಾನ ಹಾಗೂ ಕಾರ್ಯದರ್ಶಿ ಜಯದೇವ ಖಂಡಿಗೆ ಅವರು ಸುಬ್ರಹ್ಮಣ್ಯ ಮಠಾಧೀಶರನ್ನು ಗೌರವಿಸಿ ಜೀರ್ಣೋದ್ಧಾರ ಕಾಮಗಾರಿ ಮತ್ತು ಕಾಮಗಾರಿ ನಡೆದು ಬಂದ ಹಾದಿ ಬಗ್ಗೆ ಮಾಹಿತಿ ನೀಡಿದರು.
ಶ್ರೀ ಮಧೂರು ಕ್ಷೇತ್ರದಲ್ಲಿ 2025 ಮಾರ್ಚ್ 27ರಿಂದ ಎಪ್ರಿಲ್ 7ರ ವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವಾ ಕಾರ್ಯಕ್ರಮ ಸಾಂಗವಾಗಿ ನೆರವೇರಲಿ ಎಂದು ಸ್ವಾಮೀಜಿ ಹರಸಿದರು. ಈ ಸಂದರ್ಭ ಶ್ರೀ ದೇವಾಲಯದ ಪ್ರಧಾನ ಅರ್ಚಕರು, ಸಿಬ್ಬಂದಿ, ಸಮಿತಿಯ ಇತರ ಸದಸ್ಯರೂ ಉಪಸ್ಥಿತರಿದ್ದರು.