ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಹಾಗೂ ಭೂಮಿತ್ರಸೇನಾ ಕ್ಲಬ್ ಜಂಟಿ ಆಶ್ರಯದಲ್ಲಿ ವಿಶ್ವ ವನ್ಯಜೀವಿ ದಿನ ಆಚರಿಸಲಾಯಿತು. ಭೂಮಿತ್ರಸೇನ ಕ್ಲಬ್ ಸಹ ಸಂಯೋಜಕಿ ಅನುಪಮ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ದಿನಾಚರಣೆಯ ಮಹತ್ವ ತಿಳಿಸಿದರು. ಎನ್ನೆಸ್ಸೆಸ್ ಸ್ವಯಂ ಸೇವಕಿ ಶ್ರೀಲಕ್ಷ್ಮಿ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು. ಛಾಯಶ್ರೀ ನಿರೂಪಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ. ಕಾರ್ಯಕ್ರಮ ಸಂಯೋಜಿಸಿದ್ದರು.