ಗಿರ್ ಸೋಮನಾಥ: ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಇಂದು (ಭಾನುವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮೂರು ದಿನಗಳ ಕಾಲ ಗುಜರಾತ್ ಭೇಟಿಯಲ್ಲಿರುವ ಪ್ರಧಾನಿ ಮೋದಿ, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
12 ಜ್ಯೋತಿರ್ಲಿಂಗದಲ್ಲಿ ಮೊದಲನೆಯದಾದ ಸೋಮನಾಥ ಶಿವ ದೇಗುಲದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಳಿಕ ಸೋಮನಾಥ ದೇವಾಲಯಕ್ಕೆ ಭೇಟಿ ನೀಡುವುದಾಗಿ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು.