ಕಾಸರಗೋಡು: ಕಾಸರಗೋಡು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸಾಮಾಜಿಕ ನ್ಯಾಯ ಕಚೇರಿ ಜಂಟಿಯಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳನ್ನು ವಿತರಿಸಿತು. ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದ ಸಮಾರಂಭವನ್ನು ಜಿಲ್ಲಾ ಪಂಚಾಯತ್ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಮನು ಉದ್ಘಾಟಿಸಿದರು. 7 ಲಕ್ಷ ರೂ. ಮೌಲ್ಯದ ವಿವಿಧ ಸಹಾಯಕ ಸಾಧನಗಳನ್ನು ವಿತರಿಸಲಾಯಿತು. 32 ಫಲಾನುಭವಿಗಳಿಗೆ ವಿವಿಧ ರೀತಿಯ ವೀಲ್‍ಚೇರ್‍ಗಳು, ಥೆರಪಿ ಮ್ಯಾಟ್‍ಗಳು, ಥೆರಪಿ ಬಾಲ್‍ಗಳು ಮತ್ತು ಲೆಗ್ ಗೈಟರ್‍ಗಳನ್ನು ವಿತರಿಸಲಾಯಿತು.
ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಗೋಲ್ಡನ್ ಅಬ್ದುಲ್ ರೆಹಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷೆ ರುಬೀನಾ ನೌಫಲ್, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್, ಜಿಲ್ಲಾ ಸಾಮಾಜಿಕ ನ್ಯಾಯ ಇಲಾಖೆ ಅಧಿಕಾರಿ ಆರ್ಯ ಪಿ ರಾಜ್, ಮಂಗಲ್ಪಾಡಿ ತಾಲ್ಲೂಕು ಆಸ್ಪತ್ರೆ ಅಧೀಕ್ಷಕ ಡಾ. ಕೆ. ಅಶೋಕ್, ವಾರ್ಡ್ ಸದಸ್ಯ ಬಾಬು ಭಾಗವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಕ
ಮಲಾಕ್ಷಿ ಸ್ವಾಗತಿಸಿ, ಆರೋಗ್ಯ ನಿರೀಕ್ಷಕಿ ಟಿ. ಚಂದ್ರಶೇಖರನ್ ವಂದಿಸಿದರು.