ಬೆಂಗಳೂರು: ಕೇರಳ ರಾಜ್ಯದ ಗಡಿಯ ಕನ್ನಡ ಪ್ರದೇಶಗಳ ಹೆಸರುಗಳನ್ನು ಮಲಯಾಳೀಕರಣ ಮಾಡು ತ್ತಿರುವ ಬಗ್ಗೆ ಇರುವ ಕಾನೂನಾತ್ಮಕ ಅವಕಾಶಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಸದೀಯ ವ್ಯವಹಾರಗಳ ಇಲಾಖಾ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಶುಕ್ರವಾರ ವಿಧಾನಸೌಧದಲ್ಲಿ, ಹೊರರಾಜ್ಯಗಳ ಕನ್ನಡಿಗರ ಸಮಸ್ಯೆಗಳ ಬಗ್ಗೆ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಹೊರರಾಜ್ಯಗಳಲ್ಲಿ ನೆಲೆಸಿರುವ ಕನ್ನಡಿಗರ ಸಮಸ್ಯೆ ಆಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಹಾಗೂ ಹೊರ ರಾಜ್ಯದ ಗಡಿ ಸಮಸ್ಯೆಗಳ ಬಗ್ಗೆ ಪರಿಶೀಲಿಸಲು ಒಂದೊಂದು ಇಲಾಖೆಗೆ ಒಬ್ಬ ನೋಡಲ್ ಅಧಿಕಾರಿ ನೇಮಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯ ಸರಕಾರದಿಂದ ಹೊರನಾಡ ಕನ್ನಡಿಗರಿಗೆ ಇರುವ ಸವಲತ್ತುಗಳ ಬಗ್ಗೆ ಹೊರರಾಜ್ಯಗಳಲ್ಲಿ ವ್ಯಾಪಕ ಪ್ರಚಾರ ನಡೆಸುವಂತೆ ತಿಳಿಸಿದರು.
ಗಡಿ ಸಮಸ್ಯೆ ಗಂಭೀರವಾಗಿ ಚರ್ಚಿಸಿ
ಪ್ರತೀ ಗಡಿ ಜಿಲ್ಲೆಯಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಗಡಿ ಸಮಸ್ಯೆಗಳ ವಿಷಯಗಳನ್ನು ಗಂಭೀರವಾಗಿ ಚರ್ಚಿಸುವಂತೆ ಮುಖ್ಯ ಕಾರ್ಯ ದರ್ಶಿ ಸೂಚಿಸಿದರು. ಜತೆಗೆ ಈ ಸಭೆಗಳಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ವಿಶೇಷ ಆಹ್ವಾನಿತರಾಗಿ ಆಮಂತ್ರಿಸುವಂತೆ ತಿಳಿಸಿದರು. ಜತೆಗೆ ಗಡಿ ಉಸ್ತುವಾರಿ ಕಾರ್ಯದರ್ಶಿಗಳು ಕೂಡ ಗಡಿ ಸಮಸ್ಯೆಗಳ ಬಗ್ಗೆ ನಿರಂತರವಾಗಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಅವರು ನಡೆಸುವ ಸಭೆಯಲ್ಲಿ ಚರ್ಚಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಹೊರ ರಾಜ್ಯಗಳಲ್ಲಿ 658 ಕನ್ನಡ ಮಾಧ್ಯಮ ಶಾಲೆಗಳಿದ್ದು, ಒಂದು ಲಕ್ಷಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದಾರೆ ಎಂದು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಅವರು ಸರಕಾರದ ಗಮನಕ್ಕೆ ತಂದರು. ಹೊರ ರಾಜ್ಯದ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಸರಕಾರವು ಮುಂದಾಗಬೇಕು. ಆ ಭಾಗದ ವಿದ್ಯಾರ್ಥಿಗಳಿಗೆ ಮೊರಾರ್ಜಿ, ರಾಣಿ ಚೆನ್ನಮ್ಮ ಮುಂತಾದ ವಸತಿ ನಿಲಯ ಗಳಿಗೆ ಪ್ರವೇಶಾತಿ ನೀಡಬೇಕು ಎಂದು ಆಗ್ರಹಿಸಿದರು.
ಉನ್ನತ ಶಿಕ್ಷಣ ಬಯಸುವ ಹೊರನಾಡ ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಂತೆ ಸಮಾನ ಅವಕಾಶ ಕಲ್ಪಿಸಬೇಕು. ಹೊರನಾಡ ಕನ್ನಡಿಗ ರಿಗೆ ಮೀಸಲಾತಿ ನಿಯಮ ಪರಿಷ್ಕರಣೆ ಮಾಡಬೇಕು. ನಮ್ಮ ರಾಜ್ಯದ ಶಾಲಾ ಕಾಲೇಜು ಗಳಿಗೆ ಹೊರನಾಡ ಕನ್ನಡಿಗ ವಿದ್ಯಾರ್ಥಿ ಗಳು ತೆರಳಲು ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ರಿಯಾಯಿತಿ ನೀಡಬೇಕು ಎಂದರು.