ಕಾಸರಗೋಡು: ಕುಂಬಳೆ ಸೀಮೆಯ ಇತಿಹಾಸಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ ಮಾ. 27ರಂದು ಆರಂಭಗೊಳ್ಳಲಿದೆ.
27ರಂದು ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಗೆ ಚಾಲನೆ ನೀಡಲಾಗುವುದು. ಅಂದು ಬೆಳಗ್ಗೆ 8ಕ್ಕೆ ತಂತ್ರಿವರ್ಯರಿಗೆ ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ಅಥರ್ವ ಶೀರ್ಷ ಶ್ರೀ ಮಹಾಗಣಪತಿ ಯಾಗ, 9.30ಕ್ಕೆ ಪ್ರಧಾನ ವೇದಿಕೆಯಲ್ಲಿ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯುವುದು. ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಉಡುಪಿ ಫಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಚನ ನೀಡುವರು. ಬ್ರಹ್ಮಶ್ರೀ ಡಾ. ಶಿವಪ್ರಸಾದ ತಂತ್ರಿ, ಕ್ಷೇತ್ರದ ಶಿಲ್ಪಿ ಕೃಷ್ಣ ಪ್ರಸಾದ್ ಮುನಿಯಂಗಳ ದಿವ್ಯ ಉಪಸ್ಥಿತರಿರುವರು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ, ಮಾಯಿಪ್ಪಡಿ ಅರಮನೆಯ ಶ್ರೀ ದಾನಮಾರ್ತಾಂಡವರ್ಮ ಯಾನೆ ಸಾಮಂತರಸುಗಳು, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕನ್ಯನ, ಉಪಾಧ್ಯಕ್ಷ ಮಹಾಬಲೇಶ್ವರ ಭಟ್ ಎಡಕ್ಕಾನ ಗೌರವ ಉಪಸ್ಥಿತರಿರುವರು.
ಸಂಜೆ 4ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ನಿಟ್ಟೆ ವಿಶ್ವ ವಇದ್ಯಾಲಯದ ಕುಪತಿ ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸುವರು.ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಮೀಜಿ ಆಶೀರ್ವಚನ ನಿಡುವರು.ಆರೆಸ್ಸೆಸ್‍ನ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಪ್ರಧಾನ ಭಾಷಣ ಮಾಡುವರು. ಹೊರನಾಡು ಕ್ಷೇತ್ರ ಧಮಕರ್ತರಾದ ಭೀಮೇಶ್ವರ ಜೋಷಿ ಗೌರವ ಉಪಸ್ಥಿತರಿರುವರು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 7ರಿಂದ ನೃತ್ಯ ವೈವಿಧ್ಯ ನಡೆಯುವುದು.