ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣೀ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಲಿಕೋತ್ಸವ ನಡೆಯಿತು. ಶಾಲಾ ಪಿ ಟಿ ಎ ಕಾರ್ಯಕಾರಿ ಸಮಿತಿ ಸದಸ್ಯ ಅಬ್ದುಲ್ ಅಜೀಜ್ ಅಧ್ಯಕ್ಷತೆ ವಹಿಸಿದ್ದರು. ಎಂ.ಪಿಟಿಎ ಅಧ್ಯಕ್ಷೆ ರೆಹನಾ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಬಿ ಟೀಚರ್ ಕಲಿಕೋತ್ಸವದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ಅಧ್ಯಾಪಕರಾದ ಶ್ಯಾಮ್ ಭಟ್ ಮತ್ತು ಆರತಿ ಟೀಚರ್, ಪಿಟಿಎ ಕಾರ್ಯಕಾರಿ ಸಮಿತಿ ಸದಸ್ಯ ಉಸ್ಮಾನ್ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಕಲಿಕಾ ಚಟುವಟಿಕೆಗಳ ಪ್ರದರ್ಶನ ನಡೆಯಿತು. ಮಕ್ಕಳು ತಯಾರಿಸಿದ ಚಿಗುರು ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿನಿ ಡೀವಿತಾ ಕೆ ಸ್ವಾಗತಿಸಿ, ಫಾತಿಮತ್ ಶೈಮಾ ವಂದಿಸಿದರು. ಡೀವಿತಾ ಮತ್ತು ಆದಿರಾ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕ ವೃಂದ, ಅಧ್ಯಾಪಕೇತರ ಸಿಬ್ಬಂದಿ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.