ಮಧೂರು: ಅಷ್ಟಬಂಧ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವಾ ಕಾರ್ಯಕ್ರಮದ ನಡೆಯುತ್ತಿರುವ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರನ್ನು ದೇಗುಲಕ್ಕೆ ಬರಮಾಡಿಕೊಳ್ಳಲಾಯಿತು.